Slide
Slide
Slide
previous arrow
next arrow

ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್’ಗೆ ಸರ್ವೋತ್ತಮ ಸೇವಾ ಪ್ರಶಸ್ತಿ

300x250 AD

ಯಲ್ಲಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ಇಲ್ಲಿನ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸರ್ಕಾರಿ ನೌಕರರ ದಿನಾಚರಣೆಯ ಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿದ ಬಸವರಾಜ ಬೊಮ್ಮಾಯಿಯವರು, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.
ಕಂದಾಯ ಸಚಿವ ಆರ್.ಅಶೋಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top