ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟವು 32 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಅಂಗವಾಗಿ ಸಪ್ಟೆಂಬರ್, 13, ಮಂಗಳವಾರ ಮುಂಜಾನೆ 10 ಗಂಟೆಗೆ ಅರಣ್ಯವಾಸಿಗಳ ಸಮಸ್ಯೆಗಳನ್ನ ಈಡೇರಿಸುವ ದಿಶೆಯಲ್ಲಿ, ಸರಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಶಿರಸಿ ಮಾರಿಕಾಂಬಾ ದೇವಾಲಯದ ಎದುರುಗಡೆ ಅರಣ್ಯವಾಸಿ ಹೋರಾಟಗಾರರ ‘ಉರುಳು ಸೇವೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಉರುಳು ಸೇವೆ ಕಾರ್ಯಕ್ರಮದ ನಂತರ ಶಿರಸಿ ಮಾರಿಕಾಂಬಾ ದೇವಾಲಯದ ಸಭಾಂಗಣದಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಸಭೆ ಸಂಘಟಿಸಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.