Slide
Slide
Slide
previous arrow
next arrow

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಸ್ತಾವನೆ ಮಂಜೂರಾತಿಗೆ ಒಪ್ಪಿಗೆ ನೀಡದ ಆರ್ಥಿಕ ಇಲಾಖೆ:ಸಾರ್ವಜನಿಕರ ಆಕ್ರೋಶ

300x250 AD

ಕಾರವಾರ: ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಯಾವ ಕಾಲಮಿತಿಯಲ್ಲಿ ಮಂಜೂರು ಮಾಡಲಾಗುವುದು ಎಂದು ವಿಧಾನಸಭಾ ಅಧಿವೇಶನದಲ್ಲಿ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಶ್ನೆ ಕೇಳಿದ್ದು, ಇದಕ್ಕೆ ಬಂದ ಉತ್ತರ ಮತ್ತೆ ಉತ್ತರಕನ್ನಡದ ಜನರನ್ನು ಕೆರಳುವಂತೆ ಮಾಡಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬoಧಿಸಿದoತೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ನಿರ್ದೇಶಕರು, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಾರವಾರ ಇವರಿಂದ ಪಡೆದು ಸದರಿ ಪ್ರಸ್ತಾವನೆಯ ಮಂಜೂರಾತಿಗಾಗಿ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಲಾಗಿತ್ತು. ಆದರೆ, ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದಿಲ್ಲ.

300x250 AD

ಮಾತು ತಪ್ಪಿದ ಸರ್ಕಾರ: ಭರವಸೆ ಮರೆತ ಜನಪ್ರತಿನಿಧಿಗಳು: ಮಂಜೂರಾತಿ ಕೋರಿ ಮತ್ತೊಮ್ಮೆ ಕಡತವನ್ನು ಸಹಮತಿಗಾಗಿ ಆರ್ಥಿಕ ಇಲಾಖೆಗೆ ಕಳುಹಿಸಲಾಗುವುದು. ಅನುಮತಿ ದೊರತ ಬಳಿಕ ಅನುದಾನದ ಲಭ್ಯತೆಗೆ ಅನುಗುಣವಾಗಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಲಿಖತ ಉತ್ತರ ಸಿಕ್ಕಿದೆ. ವೈದ್ಯಕೀಯ ಶಿಕ್ಷಣ ಸಚಿವರು ಅನಾರೋಗ್ಯದ ನಿಮಿತ್ತ ಸಭೆಗೆ ಗೈರಾಗಿದ್ದು, ವಾರದ ಬಳಿಕ ಮತ್ತೆ ಚರ್ಚೆಗೆ ಅವಕಾಶ ನೀಡುವುದಾಗಿ ವಿಧಾನಸಭಾಧ್ಯಕ್ಷರು ಇದೆ ವೇಳೆ ಭರವಸೆ ನೀಡಿದರು.

Share This
300x250 AD
300x250 AD
300x250 AD
Back to top