ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷ ನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಸೆ.18 ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯರಾದ ಡಾ|| ಎಸ್.ಸಿ.ಕುಲಕರ್ಣಿ ಇವರು ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ.
ಕೋವಿಡ್-19ರ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಿ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಹಾಗೂ ಕಾರ್ಯದರ್ಶಿ ಅನಂತ ಹೆಗಡೆ ಆಶೀಸರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.