ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಜನರಿಂದ ಆ ಭಾಗದ ಜನಪ್ರತಿನಿಧಿಗಳ ಮೇಲೆ ಸಹಜವಾಗಿಯೇ ಒತ್ತಡ ಇರುತ್ತದೆ. ಆಸ್ಪತ್ರೆ ಮಂಜೂರು ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಬದ್ಧರಾಗಿದ್ದಾರೆ ಎಂದು `ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿರುವ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು, ಯಾವುದೇ ಯೋಜನೆ, ಕಾಮಗಾರಿಗೆ ಮೊದಲ ಬಾರಿಯೇ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಗುವುದಿಲ್ಲ. ಹೀಗಾಗಿ ಮತ್ತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದನದಲ್ಲಿ ಉತ್ತರ ಕನ್ನಡ ಜನಪ್ರತಿನಿಧಿಗಳು ಮಂಡಿಸಿರುವ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ. ಆ ಭಾಗಕ್ಕೆ ಆಸ್ಪತ್ರೆ ಮಂಜೂರು ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.