ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೌರರಕ್ಷಣಾ ದಳವನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಮುಖ್ಯ ವಾರ್ಡನ್ ಪೌರರಕ್ಷಣೆ ಗೌರವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಅಂಕಪಟ್ಟಿ, ಆಧಾರ ಕಾರ್ಡ್, ಭಾವಚಿತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಕ್ಟೋಬರ್ 10 ರೊಳಗಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08025553234 , 25576850 ಗೆ ಸಂಪರ್ಕಿಸಬಹುದಾಗಿದೆ ಎಂದು ಆರಕ್ಷಕ ಮಹಾನಿರ್ದೇಶಕರು ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.