Slide
Slide
Slide
previous arrow
next arrow

ಕುಣಬಿಗರನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಒತ್ತಾಯ

300x250 AD

ಕಾರವಾರ: ಜಿಲ್ಲೆಯ ಕುಣಬಿ ಬುಡಕಟ್ಟು ಸಮುದಾಯಕ್ಕೆ ‘ಪರಿಶಿಷ್ಟ ಪಂಗಡಕ್ಕೆ’ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಗಳು ವಿಳಂಬ ನೀತಿ ಅನುಸರಿಸುತ್ತಿದ್ದು, 15 ದಿನಗಳಲ್ಲಿ ಈ ಬಗ್ಗೆ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಬೇಕಿದೆ. ಇಲ್ಲದಿದ್ದರೆ ನಂತರದ ದಿನಗಳಲ್ಲಿ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ಕೈಗೊಳ್ಳುವುದಾಗಿ ಜೊಯಿಡಾ ಕುಣಬಿ ಸಮಾಜದ ಅಭಿವೃದ್ಧಿ ಸಂಘದ ಅಧ್ಯಕ್ಷ ಅಜಿತ್ ಮಿರಾಶಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಣಬಿ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. ನಾವು ಸಾಮಾಜಿಕ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಅರಣ್ಯವನ್ನು ನಂಬಿ ಜೀವನ ನಡೆಸುತ್ತಿದ್ದೇವೆ. ಕಳೆದ 33 ವರ್ಷಗಳಿಂದ ನಿರಂತವಾಗಿ ಭಾರತೀಯ ಸಂವಿಧಾನದ ಅನುಸೂಚಿತ ಬುಡಕಟ್ಟು ಪಂಗಡ ಪಟ್ಟಿಗೆ ಸೇರಿಸಿಕೊಳ್ಳಲು ಹಾಗೂ ಕುಣಬಿ ಸಮುದಾಯದ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಾಗಿ ಸರಕಾರಕ್ಕೆ ಒತ್ತಾಯಿಸಿ ಹೊರಟ ಮಾಡುತ್ತಾ ಬಂದಿದ್ದೇವೆ. ಆದರೆ ಈ ಹೋರಾಟಗಳ್ಯಾವುದೂ ಸಫಲತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕಳೆದ 33 ವರ್ಷಗಳಿಂದ ಸರಕಾರಕ್ಕೆ ಒತ್ತಾಯಸುತ್ತಿದ್ದೇವೆ. ನಮ್ಮ ನೆರೆಯ ರಾಜ್ಯ ಗೋವಾದಲ್ಲಿ 2007ರಲ್ಲೇ ಅಲ್ಲಿನ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ವಾಸಿಸುವ ಕುಣಬಿ ಸಮುದಯ ಪರಿಷ್ಠ ಪಂಗಡಕ್ಕೆ ಸೇರಿಸದೆ ರಾಜ್ಯ ಹಾಗೂ ಕೇಂದ್ರ ಸರಕಾರ ಅನ್ಯಾಯ ಮಾಡುತ್ತಿದೆ. ಈಗಾಗಲೇ ‘ಬೆಟ್ಟ ಕುರುಬ’ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಚಿವ ಸಂಪುಟದಲ್ಲಿ ತಿರ್ಮಾನಿಸಿದ್ದು, ನಮ್ಮ ಕುಣಬಿ ಸಮುದಾಯವನ್ನು ಕಡೆಗಣಿಸಲಾಗಿದೆ. ಆದ್ದರಿಂದ ನಮ್ಮ ಕುಣಬಿ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡಿಸಲು ತಕ್ಷಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಸೆ.23ರಂದು ಜೊಯಿಡಾದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಆಗಲೂ ಸರ್ಕಾರ ಮಣಿಯದಿದ್ದರೆ ಮುಂದೆ ಜಿಲ್ಲೆಯಾದ್ಯಂತ ಸಹಸ್ರ ಸಂಖ್ಯೆಯಲ್ಲಿ ಕುಣಬಿಗಳು ಸೇರಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

300x250 AD

ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ವಿಷ್ಣು ಡೇರೇಕರ್, ಪ್ರಮುಖರಾದ ಪ್ರಸನ್ನ ಗಾವಡ, ದೇವಿದಾಸ ವೆಳಿಪ್, ಮಾಂತೇಶ್ ಗಾವಡ ಮುಂತಾದವರಿದ್ದರು.

Share This
300x250 AD
300x250 AD
300x250 AD
Back to top