Slide
Slide
Slide
previous arrow
next arrow

ಚುಟಕು ಬ್ರಹ್ಮ ದಿನಕರ ದೇಸಾಯಿ ಜನ್ಮ ಮಾಸಾಚರಣೆ: ಭವ್ಯ ಮೆರವಣಿಗೆ

300x250 AD

ದಾಂಡೇಲಿ : ಚುಟುಕು ಬ್ರಹ್ಮ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಿಕ್ಷಣ ಕ್ಷೇತ್ರದ ಅದ್ವೀತಿಯ ಸಾಧಕ, ನಾಡು ಕಂಡ ಧೀಮಂತ ಸಾಹಿತಿ ದಿನಕರ ದೇಸಾಯಿಯವರ 113ನೇ ಜನ್ಮ ಮಾಸಾಚರಣೆಯ ನಿಮಿತ್ತ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆ ಮತ್ತು ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಭವ್ಯ ಮೆರವಣಿಗೆ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ಶಿಕ್ಷಣ ಕ್ಷೇತ್ರದ ಸರದಾರ ದಿ.ದಿನಕರ ದೇಸಾಯಿಯವರ ಭಾವಚಿತ್ರಕ್ಕೆ ಆರತಿ ಬೆಳಗಿ, ಪುಷ್ಪಗೌರವ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಜನತಾ ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಎಂ.ಎಸ್.ಇಟಗಿಯವರು ಉತ್ತರ ಕನ್ನಡ ಜಿಲ್ಲೆಗೆ ಬಹುದೊಡ್ಡ ಕೊಡುಗೆ ನೀಡಿದ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧನೆಯವೀರ, ಸಾಮಾಜಿಕ ಚಿಂತಕ, ಪರಿವರ್ತನೆಯ ಹರಿಕಾರರಾದ ದಿ.ದಿನಕರ ದೇಸಾಯಿಯವರ 113ನೇ ಜನ್ಮಮಾಸಾಚರಣೆಯನ್ನು ಜನತಾ ವಿದ್ಯಾಲಯ ಶಿಕ್ಷಣ ಸಂಸ್ಥೆಗಳು ಅತ್ಯಂತ ಗೌರವದಿಂದ ಹಮ್ಮಿಕೊಳ್ಳುತ್ತಿದೆ. ಸಂಸ್ಥೆಯ ಸಂಸ್ಥಾಪಕರನ್ನು ನೆನೆಸುವುದು ಮತ್ತು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಜನತಾ ವಿದ್ಯಾಲಯ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಕಿಶೋರ ಕಿಂದಳ್ಕರ್, ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯಿನಿ ಸಕ್ಕುಬಾಯಿ, ಜನತಾ ವಿದ್ಯಾಲಯ ಪ್ರೌಢಶಾಲೆಯ ಮತ್ತು ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜನತಾ ವಿದ್ಯಾಲಯದಿಂದ ಆರಂಭಗೊಂಡ ಆಕರ್ಷಕ ಮೆರವಣಿಗೆಯು ಕೆ.ಸಿ.ವೃತ್ತ ದಾಟಿ ಆನಂತರ ಜೆ.ಎನ್.ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣವನ್ನು ತಲುಪಿತು. ಬಸ್ ನಿಲ್ದಾಣದ ಆವರಣದಲ್ಲಿ ಜನತಾ ಪ್ರೌಢಶಾಲೆ ಹಾಗೂ ಇ.ಎಂ.ಎಸ್ ವಿದ್ಯಾರ್ಥಿಗಳಿಂದ ವಿವಿಧ ಜಾನಪದ ನೃತ್ಯ ಕರ‍್ಯಕ್ರಮವು ಮನಮೋಹಕವಾಗಿ ಜರುಗಿತು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಡಗೆಗಳನ್ನು ತೊಟ್ಟು ಗಮನ ಸೆಳೆದರು. ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ರೋಶನಜಿತ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ನಾರಾಯಣ ನಾಯ್ಕ, ಕಸಾಪ ಜಿಲ್ಲಾ ಕೋಶಾಧ್ಯಕ್ಷರಾದ ಮುರ್ತುಜಾ ಆನೆಹೊಸೂರು, ಆಶಾಕಿರಣ ಐಟಿಐ ಕಾಲೇಜಿನ ಪ್ರಾಚಾರ್ಯ ಎನ್.ಆರ್.ನಾಯ್ಕ, ಮುಖಂಡರಾದ ವಿನೋದ್ ಬಾಂದೇಕರ, ಎಎಸೈ ನಾರಾಯಣ ರಾಥೋಡ ಹಾಗೂ ಪೊಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top