Slide
Slide
Slide
previous arrow
next arrow

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಎರಡು ದಿನಗಳ ಕಮ್ಮಟ ಆಯೋಜನೆ

300x250 AD

ಕಾರವಾರ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆ ವಿಜ್ಞಾನ ಪ್ರಸಾರ ಮತ್ತು ಕುವೆಂಪು ಭಾಷಾ ಭಾರತಿ ಸಹಯೋಗದೊಂದಿಗೆ ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗಾಗಿ “ವಿಜ್ಞಾನ ಮತ್ತು ತಂತ್ರಜ್ಞಾನ ಪಠ್ಯ ಅನುವಾದ” ವಿಷಯದ ಬಗ್ಗೆ ಅ.18 ಮತ್ತು 19 ರಂದು ಬೆಂಗಳೂರಿನ ಪ್ರೊ ಯು. ಆರ್. ರಾವ್ ವಿಜ್ಞಾನ ಭವನದಲ್ಲಿ ಎರಡು ದಿನಗಳ ಕಮ್ಮಟವನ್ನು ಆಯೋಜಿಸಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಅ.8 ರೊಳಗೆಹೆಸರು ನೋಂದಾಯಿಸಿಕೊಳ್ಳಬೇಕು.ಈ ಕಮ್ಮಟದಲ್ಲಿ ವಿಶೇಷ ಉಪನ್ಯಾಸಗಳು, ಅನುವಾದ ತಂತ್ರಗಳ ಟಿಪ್ಪಣಿ, ಮತ್ತು ಅಭ್ಯಾಸ ಅಧಿವೇಶನಗಳನ್ನು ಏರ್ಪಡಿಸಲಾಗಿದ್ದು, ಗರಿಷ್ಠ 30 ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

300x250 AD

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08029721550 ಗೆ ಸಂಪರ್ಕಿಸಿ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

Share This
300x250 AD
300x250 AD
300x250 AD
Back to top