ಭಟ್ಕಳ: ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಭಾರತ ಜೋಡೋ ಯಾತ್ರೆ ಶುಕ್ರವಾರದಂದು ಕರ್ನಾಟಕಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆ ಪಾದಯಾತ್ರೆಯ ಉದ್ದೇಶದ ಕುರಿತು ಪ್ರಜೆಗಳ ಗಮನ ಸೆಳೆಯುವ ಹಿನ್ನೆಲೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ದಕ್ಷಿಣ ಗಡಿಯಾದ ಗೊರಟೆಯಿಂದ ಉತ್ತರದ ಗಡಿಯಾದ ಬೈಲೂರುವರೆಗೆ ಬೈಕ್ ರ್ಯಾಲಿ ನಡೆಸಲಾಯಿತು.
ರ್ಯಾಲಿಯುದ್ದಕ್ಕು ಭಾರತ ಜೋಡೋ ಕಾರ್ಯಕ್ರಮದ ಕುರಿತಾದ ಮಾಹಿತಿ, ಘೋಷಣೆ ಕೂಗುತ್ತಾ ತೆರಳಿದರು. ರ್ಯಾಲಿಯಲ್ಲಿ ಮಾಜಿ ಶಾಸಕ ಜೆ.ಡಿ.ನಾಯ್ಕ, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ರಾಮ ಮೊಗೇರ, ಹಿರಿಯ ಮುಖಂಡ ಸೋಮಯ್ಯ ಗೊಂಡ, ಬ್ಲಾಕ್ ಸಮಿತಿ ಉಪಾಧ್ಯಕ್ಷ ಶ್ರೀಕಂಠ ಹೆಬ್ಬಾರ್, ಕೆ.ಸುಲೇಮಾನ್ ಜಾಲಿ, ಮಾಜಿ ತಾಲೂಕು ಪಂಚಾಯತಿ ಸದಸ್ಯ ಮಹಾಬಲೇಶ್ವರ ನಾಯ್ಕ, ವಿಷ್ಣು ದೇವಾಡಿಗ, ಕಿಸಾನ್ ಸೆಲ್ ಅಧ್ಯಕ್ಷ ನಾರಾಯಣ ಜೆ ನಾಯ್ಕ, ಸೇವಾದಾಳ ಅಧ್ಯಕ್ಷ ರಾಜೇಶ ನಾಯ್ಕ, ಜಿಲ್ಲಾ ಕಾರ್ಮಿಕರ ವಿಭಾಗದ ಪ್ರಧಾನಕಾರ್ಯದರ್ಶಿ ಮಹೇಶ್ ನಾಯ್ಕ್, ಜಿಲ್ಲಾ ಕಾರ್ಮಿಕರ ವಿಭಾಗದ ಸದಸ್ಯರಾದ ಸಚಿನ್ ನಾಯ್ಕ್, ಕಾಯ್ಕಿಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಧರ್ ನಾಯ್ಕ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಜಾಲಿ ಪಟ್ಟಣ ಪಂಚಾಯತ್ ಸದಸ್ಯೆ ಶಾಹಿನಾ ಶೇಖ್ ಹಾಗೂ ಯುವ ಕಾಂಗ್ರೆಸ್ನ ಸದಸ್ಯರು ಪಾಲ್ಗೊಂಡಿದ್ದರು.