ಕಾರವಾರ: 2021-22ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಮಹಿಳಾ/ಪುರುಷ ರೇಷ್ಮೆ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರು ಕನಿಷ್ಟ 1 ಎಕರೆ ಹಿಪ್ಪು ನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆಜಿಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಮೇಲ್ಕಂಡ ಅರ್ಹತೆ ಹೊಂದಿರುವ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು/ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿಗಳನ್ನು ದಾಖಲಾತಿಗಳೊಂದಿಗೆ ಒದಗಿಸಿ ಅರ್ಜಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 10ರ ಒಳಗೆ ಸಲ್ಲಿಸುವಂತೆ ರೇಷ್ಮೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.