ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ವಿಜ್ಞಾನ ಶಿಕ್ಷಣ ಮತ್ತು ಪ್ರಸರಣಕ್ಕೆ ಪೂರಕವಾಗುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಡಾ.ಎಸ್.ಕೆ.ಶಿವಕುಮಾರ್ ಪ್ರಶಸ್ತಿ, ವಿಜ್ಞಾನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರೊ.ಯು.ಆರ್.ರಾವ್ ಪ್ರಶಸ್ತಿ ಹಾಗೂ ಜನಸಾಮಾನ್ಯರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ ಹೀಗೆ ಮೂರು ವಿಭಾಗದಲ್ಲಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದು. ಅ.31 ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಇಮೇಲ್ award.ksta@gmail.com ಗೆ ಪ್ರತಿಯನ್ನು ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಜಿಕೆವಿಕೆ ಕ್ಯಾಂಪಸ್, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ಬೆಂಗಳೂರು ಅವರಿಗೆ ಸಲ್ಲಿಸುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.