Slide
Slide
Slide
previous arrow
next arrow

ಸಿಲಿಂಡರ್ ಸ್ಪೋಟ: ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮ

300x250 AD

ಕಾರವಾರ: ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟಗೊಂಡು ಐದಕ್ಕೂ ಅಧಿಕ ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮಗೊಂಡ ಘಟನೆ ತಾಲೂಕಿನ ಮುದಗಾ ಲೇಬರ್ ಕಾಲೋನಿಯಲ್ಲಿ ಬುಧವಾ ರಬೆಳ್ಳಂಬೆಳಿಗ್ಗೆ ನಡೆದಿದೆ.

ನೌಕಾನೆಲೆಯ ಕಟ್ಟಡ ಕಾಮಗಾರಿಗೆ ಓರಿಸ್ಸಾ ಸೇರಿದಂತೆ ಹೊರರಾಜ್ಯದಿಂದ ನೂರಕ್ಕೂ ಅಧಿಕ ಕಾರ್ಮಿಕರಿ ಈ ಕಾಲೋನಿಯಲ್ಲಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದು, ಈ ಶೆಡ್ ಗಳಲ್ಲಿನ ಒಂದು ದೊಡ್ಡ ಸಿಲಿಂಡರ್, ಎರಡು ಸಣ್ಣ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಶೆಡ್‌ನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, 25ಕ್ಕೂ ಅಧಿಕ ಕಾರ್ಮಿಕರ ಮೊಬೈಲ್‌ಗಳು ಬೆಂಕಿಗಾಹುತಿಯಾಗಿದೆ.

300x250 AD

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This
300x250 AD
300x250 AD
300x250 AD
Back to top