ಕಾರವಾರ: ಜಿಲ್ಲೆಯ ಕಾರವಾರ, ಕುಮಟಾ, ಮುಂಡಗೋಡ, ಮತ್ತು ಜೊಯಿಡಾ ತಾಲೂಕುಗಳ 6 ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಅ.18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವನ್ನು ಪ್ರಕಟಿಸಲಾಗಿದೆ.
ಅ.19ರಂದು ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ, 21ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ, 28ರಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಸಬೇಕಾದ ದಿನ, 30ರಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಮರು ಮತದಾನ ಅವಶ್ಯವಿದ್ದರೆ ಮತದಾನ ನಡೆಸಬೇಕಾದ ದಿನಾಂಕ, 31ರಂದು ಆಯಾ ತಾಲೂಕುಗಳಲ್ಲಿ ಬೆಳಿಗ್ಗೆ 8ರಿಂದ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಾರ್ವಜನಿಕರ ಮಾಹಿತಿಗಾಗಿ ಚುನಾವಣಾ ಕಾರ್ಯಕ್ರಮ ಪಟ್ಟಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಿಸಿದ್ದಾರೆ.