ಸಿದ್ದಾಪುರ: ತಾಲೂಕಿನ ಕ್ಯಾದಗಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಮಹಿಳಾ ವಿಕಾಸ ಕಾರ್ಯಕ್ರಮ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಬಿಪಿ ಶುಗರ್ ಮತ್ತು ಹಿಮೋಗ್ಲೋಬಿನ್ ಪರೀಕ್ಷೆ ನಡೆಸಲಾಯಿತು.
ಕಾರ್ಯಕ್ರಮವನ್ನು ಯೋಜನಾಧಿಕಾರಿಗಳಾದ ಪ್ರಭಾಕರ ನಾಯ್ಕ ಉದ್ಘಾಟಿಸಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್ ಮಾತನಾಡಿ ಮಂಗನ ಕಾಯಿಲೆ ಬಗ್ಗೆ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಮಲ್ಲಣ್ಣಗೌಡ ಗೌಡ ಇವರು ಉಪಸ್ಥಿತರಿದ್ದು ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಿರಿಧಾನ್ಯ ಮೇಲ್ವಿಚಾರಕರಾದ ವತ್ಸಲಾ ಒಕ್ಕೂಟದ ಅಧ್ಯಕ್ಷರಾದ ಗೋವಿಂದ,ತಾಲ್ಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಭಾವತಿ, ವಲಯದ ಮೇಲ್ವಿಚಾರಕರಾದ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ಹಿಮೋಗ್ಲೋಬಿನ್ ಕಡಿಮೆ ಇರುವ 42 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಇನ್ನು 3 ತಿಂಗಳವರೆಗೆ ದಿನನಿತ್ಯ ಉಪಯೋಗಿಸಲು ಸಿರಿ ಧಾನ್ಯ ಮೊಳಕೆ ಕಟ್ಟಿದರಾಗಿ ಹೆಲ್ತ್ ಡ್ರಿಂಕ್ಸ್ ಅನ್ನು ಉಚಿತವಾಗಿ ನೀಡಲಾಗಿದೆ. ವಲಯದ ಮೇಲ್ವಿಚಾರಕರಾದ ಸುಬ್ರಹ್ಮಣ್ಯರವರು ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಭಾವತಿಯವರು ಸ್ವಾಗತಿಸಿದರು. ಸೇವಾಪ್ರತಿನಿಧಿಗಳಾದ ಮಂಜುನಾಥ್ ವಂದಿಸಿದರು.