ಹುಬ್ಬಳ್ಳಿ; ಹಲಾಲ್ ಇದು ಕೇವಲ ಮಾಂಸಕ್ಕಾಗಿ ಸೀಮಿತವಾಗಿರದೇ, ಧಾನ್ಯಗಳು, ಹಣ್ಣು ಹಂಪಲುಗಳು, ಸೌಂದರ್ಯ ಪ್ರಸಾಧನಗಳು, ಔಷಧಿಗಳು ಮುಂತಾದ ಅನೇಕ ಉತ್ಪಾದನೆಗಳು ಹಲಾಲ್ ಪ್ರಮಾಣೀಕೃತವಾಗಿರಬೇಕು ಎಂದು ಹಿಂದೂ ವ್ಯಾಪಾರಿಗಳಿಗೆ ಕಡ್ಡಾಯ ಮಾಡಲಾಗುತ್ತಿದೆ. ಹಲಾಲ್ ಪ್ರಮಾಣ ಪತ್ರದ ಹೆಸರಿನಲ್ಲಿ ದೇಶಾದ್ಯಂತ ಹಿಂದೂ ವ್ಯಾಪಾರಿಗಳಿಂದ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ. ರಾಜ್ಯದಾದ್ಯಂತ ಈ ಹಲಾಲ್ ಕುರಿತು ಜಾಗೃತಿ ಮೂಡಿಸಲು ಅ.15 ಶನಿವಾರದಂದು ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯ ಸಮೀಪವಿರುವ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಸಂಜೆ 5.30 ಕ್ಕೆ ‘ಹಲಾಲ್ ಜಿಹಾದ್ ?’ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ.
ಭಾರತದ ಸಂವಿಧಾನದ ಪ್ರಕಾರ, ಆಹಾರ ಸುರಕ್ಷೆ ಮತ್ತು ಮಾನದಂಡ ಪ್ರಾಧಿಕರಣ(FSSAI) ಈ ಅಧಿಕೃತ ಸಂಸ್ಥೆಯಿಂದ ಪ್ರಮಾಣ ಪತ್ರ ಪಡೆದಿದ್ದರೂ ಕೂಡ ಖಾಸಗಿ ಮುಸಲ್ಮಾನ ಸಂಸ್ಥೆಗಳಿಂದ ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ. ಒಟ್ಟಾರೆ ಭಾರತದ ಅರ್ಥವ್ಯವಸ್ಥೆಯ ಮೇಲೆ ದಾಳಿ ನಡೆಸಿ ಅರ್ಥ ವ್ಯವಸ್ಥೆ ದುರ್ಬಲಗೊಳಿಸುವ ಯೋಜನಾ ಬದ್ಧ ಪ್ರಯತ್ನ ಹಲಾಲನ ಮೂಲಕ ಮಾಡಲಾಗುತ್ತಿದೆ. ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕರೆ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಜಿ ಮತ್ತು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ್ ಶಿಂದೆ ಸೇರಿದಂತೆ ಇನ್ನೂ ಅನೇಕ ಗಣ್ಯರ ಗೌರವಾನ್ವಿತ ಉಪಸ್ಥಿತಿ ಇರಲಿದೆ.
ಹೆಚ್ಚಿನ ಮಾಹಿತಿಗಾಗಿ 7204082745 ಈ ಸಂಖ್ಯೆಗೆ ಸಂಪರ್ಕಿಸಿ, ಹಾಗೂ Facebook.com/jagohindukarnataka ಮತ್ತು youtube.com/HJSKarnataka ಈ ಚಾನೆಲ್ ಮೂಲಕ ಈ ಕಾರ್ಯಕ್ರಮದ ನೇರಪ್ರಸಾರ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.