ಅಂಕೋಲಾ: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕನಿಷ್ಠ 100 ರೂ. ಕೊಡುಗೆಯನ್ನು ಪಡೆಯುವ ಮತ್ತು ಆ ಮೂಲಕ ಬಡವರ ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ, ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಲು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಬಲವಾಗಿ ಒತ್ತಾಯಿಸುತ್ತದೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತಾರಾಮ ನಾಯಕ ತಿಳಿಸಿದ್ದಾರೆ.
ಕರ್ನಾಟಕ ಸರಕಾರ ದಿನಾಂಕ: 19.10.2022ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು (ಸಂಖ್ಯೆ: ಸಿ(7) ಸ.ಶಾಲಾ.ದೇಣಿಗೆ.01/2022-23). ಇದು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಆ ಮೂಲಕ ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆಯಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಸು ಪಡೆಯಬೇಕೆಂದು ಒತ್ತಾಯಿಸಿದೆ.