ಕಾರವಾರ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಗಣ್ಯರು ನಾಡಿನ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ, ಕಾರವಾರ ಶಾಸಕಿ ರೂಪಾಲಿ ನಾಯ್ಕ, ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಮಾಜಿ ಶಾಸಕ ಸತೀಶ್ ಸೈಲ್ ಸೇರಿದಂತೆ ಮತ್ತಿತರರು ಬೆಳಕಿನ ಹಬ್ಬ ದೀಪಾವಳಿ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಆಶಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ, ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಷಯಗಳು. ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ ಸುಖ ಶಾಂತಿ ಹಾಗೂ ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.