ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರರಿಗೆ ಮತ್ತು ಪುರುಷ ಆಟಗಾರರಿಗೆ ಬಿಸಿಸಿಐ ಸಮಾನ ವೇತನವನ್ನು ಘೋಷಣೆ ಮಾಡಿದೆ. ಕ್ರೀಡೆಯಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಇದು ಐತಿಹಾಸಿಕ ನಿರ್ಧಾರವಾಗಿದೆ.
ಈ ಬೆಳವಣಿಗೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.
“ತಾರತಮ್ಯವನ್ನು ಹೋಗಲಾಡಿಸುವ BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ನಾವು ನಮ್ಮ ಒಪ್ಪಂದದಡಿಯ ಮಹಿಳಾ ಕ್ರಿಕೆಟಿಗರಿಗೆ ವೇತನ ಇಕ್ವಿಟಿ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ನಾವು ಲಿಂಗ ಸಮಾನತೆಯ ಹೊಸ ಯುಗಕ್ಕೆ ಸಾಗುತ್ತಿರುವ ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ನಲ್ಲಿ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯ ಶುಲ್ಕ ಒಂದೇ ಆಗಿರುತ್ತದೆ” ಎಂದು ಶಾ ಟ್ವೀಟ್ ಮಾಡಿದ್ದಾರೆ.
“ಮಹಿಳಾ ಕ್ರಿಕೆಟಿಗರಿಗೆ ಅವರ ಪುರುಷ ಸಹವರ್ತಿಗಳಿಗೆ ಸಮಾನವಾದ ಪಂದ್ಯ ಶುಲ್ಕವನ್ನು ನೀಡಲಾಗುತ್ತದೆ. ಟೆಸ್ಟ್ (ರೂ 15 ಲಕ್ಷಗಳು), ODI (ರೂ 6 ಲಕ್ಷಗಳು), T20I (ರೂ 3 ಲಕ್ಷಗಳು). ಈಕ್ವಿಟಿ ನಮ್ಮ ಮಹಿಳಾ ಕ್ರಿಕೆಟಿಗರಿಗೆ ನಮ್ಮ ಬದ್ಧತೆಯಾಗಿದೆ ಮತ್ತು ಅಪೆಕ್ಸ್ ಕೌನ್ಸಿಲ್ ಅವರ ಬೆಂಬಲಕ್ಕಾಗಿ, ನಾನು ಅವರಿಗೆ ಧನ್ಯವಾದ ಹೇಳುತ್ತೇನೆ”ಎಂದು ಅವರು ಹೇಳಿದ್ದಾರೆ.
ಕೃಪೆ :http://news13.in