Slide
Slide
Slide
previous arrow
next arrow

ಕಬ್ಬು ಬೆಳೆಗಾರರ ಪ್ರತಿಭಟನೆ; ಬಿಜೆಪಿ ಅಧ್ಯಕ್ಷನ ಕಿವಿಮಾತು!

300x250 AD

ಹಳಿಯಾಳ: ಬಿಜೆಪಿ ಸರ್ಕಾರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಗಣಪತಿ ಕರಂಜೇಕರ ತಿಳಿಸಿದ್ದಾರೆ.
ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸಂಬಂಧಪಟ್ಟಂತೆ ಈಗಾಗಲೇ ಸುನಿಲ್ ಹೆಗಡೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು, ಸಕ್ಕರೆ ಸಚಿವರನ್ನು ಭೆಟಿ ಮಾಡಿ ಅವರ ಗಮನಕ್ಕೆ ತಂದ ಫಲವೇ ಕಾರವಾರದಲ್ಲಿ ಸಕ್ಕರೆ ಆಯುಕ್ತರ ಸಭೆ ನಡೆಸಲಾಗಿದೆ. ಕಬ್ಬು ಬೆಳೆಗಾರ ಸಂಘದವರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೂಡ ಭೇಟಿಯಾಗಿದ್ದು,ನಾಲ್ಕೈದು ದಿನಗಳಲ್ಲಿ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ ಎಂದು ನೀಡಿದ್ದರು. ದೀಪಾವಳಿ ಹಬ್ಬವಾದ್ದರಿಂದ ಹಾಗೂ ಕೆಲವು ಕಾರಣಗಳಿಂದ ಸರ್ಕಾರ ಸ್ವಲ್ಪ ವಿಳಂಬವಾಗಿರಬಹುದು. ಆದರೆ ಮುಂದಿನ ನಾಲ್ಕೈದು ದಿನಗಳಲ್ಲಿ ರೈತರ ಪರವಾಗಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.
ಯಾವತ್ತೂ ಸರ್ಕಾರ ಹಾಗೂ ಮಾಜಿ ಶಾಸಕ ಸುನೀಲ ಹೆಗಡೆ ಅವರು ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಸಮಸ್ತ ರೈತರು, ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಅಭಿಮಾನಿಗಳು ಈ ಎಲ್ಲ ಸಂಗತಿಗಳನ್ನು ಪರಿಶೀಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕೋ ಬೇಡವೋ ಎನ್ನುವ ಬಗ್ಗೆ ತೀರ್ಮಾನ ಕೈಗೊಳ್ಳಿ ಎಂದು ಕರಂಜೇಕರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top