ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಉಪಟಳ ಮುಂದುವರೆಸಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.
ಇಲ್ಲಿನ ಕೌಸರ್‌ನಾಗ್ ಪ್ರದೇಶದ ಆಸ್ಥಾನ್ ಮಾರ್ಗ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅವಿತು ಕುಳಿತ ಉಳಿದ ಉಗ್ರರಿಗೆ ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ.
ಮತ್ತೊಂದೆಡೆ, ಬಂಡಿಪೋರ್ ಜಿಲ್ಲೆಯಲ್ಲಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಅಲೂಸಾ ಪ್ರದೇಶದಲ್ಲಿ ಸೇನಾ ವಾಹನ ಸಂಚರಿಸಿದ ಕೆಲ ನಿಮಿಷಗಳಲ್ಲೇ ಘಟನೆ ನಡೆದಿದೆ. ಇದರಲ್ಲಿ ಯಾವುದೇ ಪ್ರಾಣಹಾನಿ ಹಾಗೂ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ದೌಡಾಯಿಸಿದ್ದು, ಇಲ್ಲಿಯೂ ಕೂಡ ಶೋಧ ಕಾರ್ಯಾರಂಭಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.