ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಾಂಬೆ ಭಾವಚಿತ್ರಕ್ಕೆ ಪ್ರಾಚಾರ್ಯ ಡಾ.ಟಿ. ಎಸ್. ಹಳೆಮನೆ ಪುಷ್ಪ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೈಸೂರು ರಾಜರು ಭಾಷಾವಾರು ರಾಜ್ಯ ರಚನೆಗೆ ಒಪ್ಪಿಗೆ ಸೂಚಿಸಿದ ಕಾರಣ ಮೈಸೂರು ರಾಜ್ಯವಾಗಿತ್ತು. ತದನಂತರ ಕರ್ನಾಟಕ ಎಂದು ನಾಮಕರಣ ಆಯಿತು. ಇಂದು ನಾವು ಗಡಿ ಭಾಗಗಳಲ್ಲಿ ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ ಕ್ಷೀಣಿಸುತ್ತಿದ್ದು ಆತಂಕಕಾರಿ ವಿಷಯವಾಗಿದೆ. ಮಹಾಜನ್ ವರದಿ ಇದ್ದರೂ ಗಡಿ ತಂಟೆಗಳು ಮುಂದುವರಿದಿವೆ.ಹಾಗಾಗಿ ಕನ್ನಡ ನಾಡು ನುಡಿಯ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.