Slide
Slide
Slide
previous arrow
next arrow

ಜನಮನ ಸೂರೆಗೊಳಿಸಿದ ಸಾಂಸ್ಕೃತಿಕ ಕಾರ್ಯಕ್ರಮ

300x250 AD

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ತಾಲೂಕು ಆಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೂರೆಗೊಂಡಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ನಾವೆಲ್ಲರೂ ಕನ್ನಡದಲ್ಲೆ ಮಾತನಾಡುವ ಮತ್ತು ವ್ಯವಹರಿಸುವ ಮೂಲಕ ಭಾಷಾಭಿಮಾನ ಮೆರೆಯುವ ಸಂಕಲ್ಪ ಮಾಡೋಣ. ಕುಮಟಾದ ನಾಲ್ಕು ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯದಲ್ಲಿ ನಾವೆಲ್ಲ ಕಟಿಬದ್ಧರಾಗೋಣ ಎಂದರು.

ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ್ ಮಾತನಾಡಿ, ಕನ್ನಡ ಭಾಷೆ ಸಾಂಸ್ಕೃತಿಕ, ಸಾಹಿತಿಕವಾಗಿ ಶ್ರೀಮಂತವಾಗಿದೆ. ಕನ್ನಡ ಶಾಸ್ತ್ರೀಯ ಭಾಷೆಯಾಗಿದೆ. ಇಂಥ ಕನ್ನಡ ಭಾಷೆಯನ್ನು ಗೌರವಿಸುವ ಪ್ರತಿಜ್ಞೆ ಮಾಡೋಣ. ನಾವು ಕನ್ನಡ ಭಾಷೆಯನ್ನು ಮಾತನಾಡುವ ಮತ್ತು ಕಡ್ಡಾಯವಾಗಿ ವ್ಯವಹರಿಸೋಣ ಎಂದರು.

ಈ ಸಂದರ್ಭದಲ್ಲಿ ಕನ್ನಡ ಗೀತೆಗಳನ್ನು ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿದರು. ಅಲ್ಲದೇ ಮಹಿಳಾ ಮತ್ತು ಪುರುಷ ಅಧಿಕಾರಿಗಳ ಜೊತೆಗೆ ಶಾಸಕರು ಕೂಡ ಕನ್ನಡದ ಗೀತೆಯನ್ನು ಹಾಡುವ ಮೂಲಕ ಎಲ್ಲರ ಗಮನ ಸೆಳೆದರು.

300x250 AD

ಜಾಥಾ: ಸಭಾ ಕಾರ್ಯಕ್ರಮಕ್ಕೂ ಮುನ್ನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಜಾಥ ನಡೆಯಿತು. ಮಾಸ್ತಿಕಟ್ಟೆ ಸರ್ಕಲ್‌ನಿಂದ ಆರಂಭವಾದ ಜಾಥಾ ಹಳೇ ಬಸ್ ನಿಲ್ದಾಣ, ಪೊಲೀಸ್ ಠಾಣೆ ಮಾರ್ಗವಾಗಿ ಮಣಕಿ ಮೈದಾನದಲ್ಲಿ ಸಮಾವೇಶಗೊಂಡಿತು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಅನುರಾಧಾ ಬಾಳೇರಿ, ಉಪಾಧ್ಯಕ್ಷೆ ಸುಮತಿ ಭಟ್, ಚೇರಮೆನ್ ಶುಶೀಲಾ ಗೋವಿಂದ ನಾಯ್ಕ, ತಹಸೀಲ್ದಾರ್ ವಿವೇಕ ಶೇಣ್ವಿ, ಸಿಪಿಐ ತಿಮ್ಮಪ್ಪ ನಾಯ್ಕ, ತಾಪಂ ಇ ಒ ನಾಗರತ್ನ ನಾಯಕ, ಪುರಸಭೆ ಮುಖ್ಯಾಧಿಕಾರಿ ಅಜಯ ಭಂಡರ‍್ಕರ್, ಪುರಸಭೆ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕ ಮಂಜುನಾಥ ನಾಯ್ಕ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಡೆದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರನ್ನು ರಂಜಿಸಿತು.

Share This
300x250 AD
300x250 AD
300x250 AD
Back to top