ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ನ.25ರ ಒಳಗೆ ಸಲ್ಲಿಸಲು ಸೂಚಿಸಿದ್ದಾರೆ. ತರಬೇತಿಯೂ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ08284- 298 547 , 80507 41744, 96321 43217ಗೆ ಸಂಪರ್ಕಿಸಬಹುದು ಎಂದು ಆರಸೆಟಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.