ಶಿರಸಿ: ತಾಲೂಕಿನ ಬನವಾಸಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಅಣುಕು ಸಂಸತ್ತು ಕಾರ್ಯಕ್ರಮ ನಡೆಯಿತು. ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರು ಗಂಭೀರವಾದ ಚರ್ಚೆಯಲ್ಲಿ ಪಾಲ್ಗೊಂಡರು. ಜನಪರ ಕೆಲಸಗಳು ಮತ್ತು ಸಾಧನೆಗಳ ಕುರಿತು ಮುಖ್ಯಮಂತ್ರಿ ಮತ್ತು ಇತರ ಮಂತ್ರಿಗಳು ಸಮರ್ಥನೆಯನ್ನು ನೀಡಿದರೆ, ವಿರೋಧ ಪಕ್ಷದ ಮುಖಂಡರು ಮತ್ತು ಸದಸ್ಯರು ಅವರ ಕಾರ್ಯವೈಖರಿಯನ್ನು ಗಂಭೀರವಾಗಿ ಪ್ರಶ್ನಿಸಿದರು. ಸದನದ ಬಾವಿಗಿಳಿದು ಪ್ರತಿಭಟನೆ, ಧರಣಿ ಎಲ್ಲವೂ ನಡೆದವು. ಸಭಾಪತಿಗಳು ಎರಡೂ ಪಕ್ಷಗಳ ಮಧ್ಯೆ ಸಮನ್ವಯವನ್ನು ತರುತ್ತ ಚರ್ಚೆಯನ್ನು ಉತ್ತಮವಾಗಿ ನಡೆಸಿಕೊಟ್ಟರು.
ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತ ಪ್ರಾಚಾರ್ಯರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳ ಅಣಕು ಸಂಸತ್ತನ್ನು ವೀಕ್ಷಿಸಿದರು. ಮತದಾರರ ಸಾಕ್ಷರತಾ ಕ್ಲಬ್ ನ ಸಂಯೋಜಕರಾದ ರಾಜ್ಯಶಾಸ್ತ್ರ ಉಪನ್ಯಾಸಕಿ ಪ್ರಭಾವತಿ ಹೆಗಡೆ ಕಾರ್ಯಕ್ರಮವನ್ನು ಸಂಘಟಿಸಿ ನಡೆಸಿಕೊಟ್ಟರು.