ದಾಂಡೇಲಿ : ನಗರ ಸಭೆಯ ಪೌರಾಯುಕ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಆರ್.ಎಸ್.ಪವಾರ್ ಅವರಿಗೆ ಕರ್ನಾಟಕ ಪೌರಾಡಳಿತ ಮೂಲ ವೃಂದದ ಮುಖ್ಯಾಧಿಕಾರಿ ಶ್ರೇಣಿ-2 ರಿಂದ ಕೆಎಂಎಎಸ್ ಮುಖ್ಯಾಧಿಕಾರಿ ಶ್ರೇಣಿ-1 ರ ಹುದ್ದೆಗೆ ಪದೋನ್ನತಿಯನ್ನು ನೀಡಿ ವರ್ಗಾವಣೆ ಮಾಡಲಾಗಿದೆ.
ಪದೋನ್ನತಿಗೊಂಡ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರನ್ನು ಒಂದು ದಿನದ ಮಟ್ಟಿಗೆ ಹಳಿಯಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದ್ದು, ತದನಂತರ ದಾಂಡೇಲಿ ನಗರ ಸಭೆಯ ಪೌರಾಯುಕ್ತರಾಗಿ ಮುಂದುವರಿಯಲಿದ್ದಾರೆ.