ಹೊನ್ನಾವರ: ಸರಕಾರಿ ಮೋಹನ ಕೆ.ಶೆಟ್ಟಿ ಪದವಿಪೂರ್ವ ಕಾಲೇಜು ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ವೇದಿಕೆಗಳ ಸಂಯುಕ್ತ ಆಶ್ರಯದಲ್ಲಿ ವ್ಯವಹಾರ ಅಧ್ಯಯನ ಹಾಗೂ ಲೆಕ್ಕಶಾಸ್ತ್ರ ವಿಷಯಗಳ ಕುರಿತು ಕಾರ್ಯಾಗಾರ ಪಟ್ಟಣದ ಸರಕಾರಿ ಮೋಹನ ಕೆ.ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ನಿಟ್ಟೂರು ಕಾರ್ಯಾಗಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿ, ದೇಶದ ಸರ್ವತೋಮುಖ ಅಭಿವೃದ್ಧಿಗೆ ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದರು.
ಕೆನರಾ ಎಕ್ಸಲೆನ್ಸ್ ಪಿ.ಯು.ಕಾಲೇಜ್ ಪ್ರಾಚಾರ್ಯ ಡಿ.ಎನ್.ಭಟ್ಟ ದಿಕ್ಸೂಚಿ ಭಾಷಣ ಮಾಡಿದರು. ಪ್ರಾಚಾರ್ಯ ರವಿ. ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಚಾರ್ಯರಾದ ಸತೀಶ. ಬಿ.ನಾಯ್ಕ, ಪ್ರಸಾದ ರಾಣೆ, ಬಿ.ಎಸ್.ಹೆಗಡೆ, ಎನ್.ಜಿ.ಹೆಗಡೆ, ವಿನೋದ ಹೆಗಡೆ ಹಾಗೂ ವಾಣಿಜ್ಯ ಉಪನ್ಯಾಸಕರು ಉಪಸ್ಥಿತರಿದ್ದರು.