ದಾಂಡೇಲಿ: ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಅಧ್ಯಾಯ ಮತ್ತು ನಗರದ ಪಾಟೀಲ್ ನರ್ಸಿಂಗ್ ಹೋಮ್ ಸಹಯೋಗದಲ್ಲಿ ನ.11ರಿಂದ 13ರವರೆಗೆ ಪಾಟೀಲ್ ನರ್ಸಿಂಗ್ ಹೋಮ್ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿಬಿರದ ¸ ಡಾ.ಮೋಹನ ಪಾಟೀಲ್ ಹೇಳಿದರು.
ಈಗಾಗಲೆ ಪ್ರಾರಂಭಿಕ ಪರೀಕ್ಷೆ ಮಾಡಿ ಗುರುತಿಸಲಾದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದಾಂಡೇಲಿ, ಹಳಿಯಾಳ, ಜೋಯಿಡಾ, ರಾಮನಗರ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶದ ಒಟ್ಟು 18 ಬಡ ರೋಗಿಗಳಿಗೆ ಉಚಿತವಾಗಿ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು.
ಈ ಶಿಬಿರದಲ್ಲಿ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಮತ್ತು ಹೊರಗಡೆ ಹೋಗಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲು ಸಾಧ್ಯವಾಗದ ರೋಗಿಗಳನ್ನು ಗುರುತಿಸಿ, ಅಂತಹ ಆಯ್ದ 18 ರೋಗಿಗಳಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ತಜ್ಞ ವೈದ್ಯರುಗಳಿಂದ ಮಾಡಲಾಗುತ್ತದೆ. ಈ ಶಿಬಿರ ನ.11ರಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ ಎಂದು ತಿಳಿಸಿದರು.