ಭಟ್ಕಳ: ಮುರ್ಡೆಶ್ವರದ ಜನತಾ ವಿದ್ಯಾಲಯ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನಕಜಯಂತಿಯನ್ನು ಆಚರಿಸಲಾಯಿತು.
ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಕನಕದಾಸರು ಕೀರ್ತನಕಾರ, ಸಾಹಿತಿ,ಕವಿ,ದಾರ್ಶನಿಕ, ಸಮಾಜ ಸುಧಾರಕರಾಗಿ ಬಹುಮುಖ ವ್ಯಕ್ತಿತ್ವದಿಂದ ಈ ನಾಡಿನ ಇತಿಹಾಸದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಮೌಢ್ಯ, ಅಂಧಶ್ರದ್ಧೆ, ಕಂದಾಚಾರ, ಅಸಮಾನತೆ ತಾಂಡವವಾಡುತ್ತಿದ್ದ ಕಾಲಘಟ್ಟದಲ್ಲಿ ಸಾಹಿತ್ಯದ ಮೂಲಕ ಸಮಾಜ ಸುಧಾರಣೆಗೆ ಕಾರಣರಾದರರು ಎಂದರು.
ಕನಕದಾಸರಂಥ ಮಹಾನುಭಾವರ ಜಯಂತಿಗಳು ಅವರ ವ್ಯಕ್ತಿತ್ವ, ಸಾಧನೆ, ಸಮಾಜಕ್ಕೆ ಅವರ ಕೊಡುಗೆಗಳನ್ನು ಸ್ಮರಿಸಿಕೊಂಡು ನಮ್ಮ ವ್ಯಕ್ತಿತ್ವವನ್ನೂ ಮತ್ತಷ್ಟು ಎತ್ತರಕ್ಕೆ ಏರಿಸಿಕೊಳ್ಳಲು ಪ್ರೇರಣೆ ನೀಡುತ್ತವೆ ಎಂದರು.
ವೇದಿಕೆಯಲ್ಲಿ ಸಾಹಿತಿ ಮಾನಾಸುತ ಶಂಭು ಹೆಗಡೆ, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಪಿ.ಭಂಡಾರಿ, ಶಾಲೆಯ ಮುಖ್ಯ ಶಿಕ್ಷಕಿ ಆಶಾ ಕಲ್ಮನೆ ಮಾತನಾಡಿದರು.