ಕಾರವಾರ: ಕನಕದಾಸರ ತತ್ವ ಸಿದ್ದಾಂತಗಳನ್ನು ಅರಿತು ನಾವೆಲ್ಲರೂ ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯತೆ ಇದೆ ಎಂದು ಪ್ರಾಂಶುಪಾಲರಾದ ವಿದ್ಯಾ ನಾಯಕ್ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನಕದಾಸರ ಸಾಮಾಜಿಕ ಕಳಕಳಿ ಮತ್ತು ಅವರ ಅಗಾಧಭಕ್ತಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಅತಿಥಿ ಉಪನ್ಯಾಸಕಿ ಡಾ. ಆಶಾಲತಾ ಕನಕದಾಸರ ಜೀವನ ಮತ್ತು ಸಾಧನೆ ಬಗ್ಗೆ ಉಪನ್ಯಾಸ ನೀಡಿದರು. ಉಪನ್ಯಾಸಕಿ ಡಾ. ಗೀತಾ ತಳವಾರ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಚೇತನ, ರೋಷನಿ ನಂದಿತಾ ಹಾಗೂ ಪ್ರ ದೂ ಮನ್ ಹಾಡಿದರು ಕನ್ನಡ ವಿಭಾಗದ ಅತಿಥಿ ಉಪನ್ಯಾಸಕಿ ವನಿತಾ ದೇಶ ಭಂಡಾರಿ ಅವರು ನಿರೂಪಿಸಿದರು. ಅತಿಥಿ ಉಪನ್ಯಾಸಕಿ ಡಾ. ದೊಡ್ಡಮನಿ ವಂದಿಸಿದರು. ಉಪನ್ಯಾಸಕಿ ಗೀತಾ ವಾಲಿಕಾರ್ ಸೇರಿದಂತೆ ಕಾಲೇಜಿನ ಬೋಧಕ ವರ್ಗ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.