ಅಂಕೋಲಾ: ಅತಿಯಾದ ಪ್ಲಾಸ್ಟಿಕ್ ಬಳಕೆ ಹಾಗೂ ಅದರ ಸರಿಯಾದ ನಿರ್ವಹಣೆಯ ಕೊರತೆಯಿಂದ ಜೀವನಾವಶ್ಯಕ ನೀರು ಕಲುಷಿತಗೊಂಡು ಅಂತರ್ಜಲ ಕಡಿಮೆಯಾಗುತ್ತದೆ ಎಂದು ಅಚವೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬಾಲಚಂದ್ರ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಹಾಗೂ ಸಂಗಮ ಸೇವಾ ಸಂಸ್ಥೆ ಬಾಳೆಗುಳಿ ಸಂಯುಕ್ತ ಆಶ್ರಯದಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲಜಾಗೃತಿ ಕಾರ್ಯಕ್ರಮದಲ್ಲಿ ಪ್ರಮುಖ ಉಪನ್ಯಾಸಕರಾಗಿ ಮಾತನಾಡಿದರು. ಅತಿಥಿಗಳಿಗೆ ಕುಡಿಯಲು ನೀರನ್ನು ಉಚಿತವಾಗಿ ನೀಡುವ ನಮ್ಮ ಸನಾತನ ಸಂಸ್ಕೃತಿಯು ಇಂದು ದುಡ್ಡು ಕೊಟ್ಟು ಕುಡಿಯುವ ನೀರು ಪಡೆಯುವ ಪರಿಸ್ಥಿತಿ ಬಂದೊದಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪವಿತ್ರಾ ಸಂಗಡಿಗರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ರವೀಂದ್ರ ಎನ್.ಶೆಟ್ಟಿ ಸ್ವಾಗತಿಸಿದರು. ಶಾಲಾ ಪ್ರಭಾರಿ ಮುಖ್ಯೋಪಾಧ್ಯಾಯರಾದ ನೀಲಾ ಮೇಸ್ತ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸುಗಂಧಿ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ತಿಮ್ಮಣ್ಣ ಭಟ್ ಬಿ. ವಂದಿಸಿದರು.