ಕಾರವಾರ: ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ, ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರುವ 40 ವರ್ಷದೊಳಗಿನವರನ್ನು ಜಿಲ್ಲಾ ಕಚೇರಿಗೆ ಇಬ್ಬರು ಪರಿಶಿಷ್ಟ ಜಾತಿ ಅಭ್ಯರ್ಥಿಗಳನ್ನು ಮುಖ್ಯವಾಗಿ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಅ.28ರಂದು ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು ನ.10 ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಆದರೆ ನಿಗದಿತ ಅವಧಿಯೊಳಗೆ ಅರ್ಜಿಗಳು ಬಾರದೆ ಇರುವುದರಿಂದ ಆ ಅವಧಿಯನ್ನು ನ.25ರವರೆಗೆ ವಿಸ್ತರಿಸಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತ ಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ ಜಿಲ್ಲಾಧಿಕಾರಿ ಕಚೇರಿ ಹತ್ತಿರ, ಕಾರವಾರ- 581301 ಅಥವಾ ದೂರವಾಣಿ ಸಂಖ್ಯೆ: 08382226344, 9448404223, 8105734689 ಗೆ ಸಂಪರ್ಕಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.