ದಾಂಡೇಲಿ: ನಗರದ ಹಳೆದಾಂಡೇಲಿಯಿಂದ ಪಟೇಲ್ ನಗರದವರೆಗೆ ಯುಜಿಡಿ ಪೈಪ್ಲೈನ್ ಅಳವಡಿಕೆಗಾಗಿ ರಸ್ತೆ ಅಗೆದು, ಪೈಪ್ಲೈನ್ ಕಾಮಗಾರಿ ಮಾಡಲಾಗಿದೆಯಾದರೂ, ರಸ್ತೆಯನ್ನು ಮಾತ್ರ ಈವರೆಗೆ ದುರಸ್ತಿ ಮಾಡಲಾಗಿಲ್ಲ. ಪರಿಣಾಮವಾಗಿ ವಾಹನ ಸಂಚಾರಕ್ಕೆ ಮಾತ್ರವಲ್ಲದೇ ಪಾದಚಾರಿಗಳಿಗೂ ಸಂಕಷ್ಟ ಎದುರಾಗಿದೆ.
ಇಲ್ಲಿ ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಇನ್ನೂ ಪಟೇಲ್ ನಗರದಲ್ಲಿರುವ ರುದ್ರಭೂಮಿಗೂ ಹೆಣಗಳನ್ನು ಕೊಂಡೊಯ್ಯಲು ಹರಸಾಹಸ ಪಡಬೇಕಾಗಿದೆ. ಇದೇ ರಸ್ತೆಯಲ್ಲಿ ಕಲ್ಯಾಣ ಮಂಟಪವು ಇದ್ದು, ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಬರಲು ಸಾರ್ವಜನಿಕರಿಗೆ ಕಷ್ಟವಾಗುತ್ತಿದೆ. ಕೂಡಲೆ ಹದಗೆಟ್ಟಿರುವ ರಸ್ತೆಯನ್ನು ದುರಸ್ತಿಗೊಳಿಸುವಂತೆ ದಾಂಡೇಲಿ ತಾಲ್ಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಅವರು ಆಗ್ರಹಿಸಿದ್ದಾರೆ. ಕೂಡಲೆ ರಸ್ತೆ ದುರಸ್ತಿ ಮಾಡದಿದ್ದ ಪಕ್ಷದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.