ಹಳಿಯಾಳ: ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಅಭಿಮಾನ, ಸಂಸ್ಕೃತಿಯ ಇತಿಹಾಸ ಹಾಗೂ ಪರಂಪರೆಯನ್ನು ಪರಿಚಯಿಸುವ ದೃಷ್ಟಿಯಿಂದ ಕನ್ನಡ ಹಬ್ಬವನ್ನು ಆಚರಿಸುತ್ತಾ ಬಂದಿದ್ದು, 9ನೇಯ ಕನ್ನಡ ಹಬ್ಬವನ್ನು ನ.24ರಂದು ಆಯೋಜಿಸಲು ನಿರ್ಧರಿಸಲಾಗಿದೆ.
ಹೊನ್ನಾವರ ತಾಲೂಕಿನ ಹೊಸಾಕುಳಿಯ ಶಿಕ್ಷಕರು, ಲೇಖಕರು, ಉಪನ್ಯಾಸಕರು ಹಾಗೂ ಅನೇಕ ಪುಸ್ತಕಗಳನ್ನು ಬರೆದು ಮಕ್ಕಳಿಗೆ ಯುವಕರಿಗೆ ಮಾರ್ಗದರ್ಶನ ನೀಡುತ್ತಿರುವ ಸಂದೀಪ ಭಟ್ಟ ಮುಖ್ಯ ಅತಿಥಿಗಳಾಗಿ ಆಗಮಿಸಿ ಕನ್ನಡ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಆರ್‌ಡಿಎಂ ಟ್ರಸ್ಟಿನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಡಿಪಿಐಟಿಐ ಕನ್ನಡ ಸಂಘದ ವತಿಯಿಂದ ನಡೆಸಲಾಗುತ್ತಿದೆ ಎಂದು ಸಂಚಾಲಕ ಡಿ.ಡಿ.ನಾಯ್ಕ ತಿಳಿಸಿದ್ದಾರೆ.