ದಾಂಡೇಲಿ: ನಗರದಲ್ಲಿ ಸಾರಿಗೆ ಬಸ್ಸುಗಳ ಸಮಸ್ಯೆ ದಿನೇ ದಿನೇ ಹೆಚ್ಚಾಗತೊಡಗಿದ್ದು, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಬಸ್ ಬರದೇ ಸಮಸ್ಯೆಯಾಗುತ್ತಿದೆ.
ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದಿರುವ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗೆ ಹೋಗಲು ಬಸ್ಸನ್ನು ಹತ್ತಿದ್ದಾರೆ. ವಿರಳವಾಗಿ ಬಸ್ ಇರುವುದರಿಂದ ಒಂದೇ ಬಸ್ಸಿನಲ್ಲಿ ಕೋಳಿ ಗೂಡಿನಲ್ಲಿ ಆನೆಯನ್ನು ತುರುಕಿಸಿದಂತೆ ಪ್ರಯಾಣ ಮಾಡಬೇಕಾದ ಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಬಸ್ಸಿನ ಮೆಟ್ಟಿಲಲ್ಲಿ ನಿಂತು ನೇತಾಡಿಕೊಂಡು ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ಏನಾದರೂ ಅನಾಹುತವಾದಲ್ಲಿ ಇದಕ್ಕೆ ಜವಾಬ್ದಾರಿ ಯಾರು ಎನ್ನುವ ಪ್ರಶ್ನೆ ನಿರ್ಮಾಣವಾಗಿದೆ.
ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಬಸ್ಸುಗಳ ಸಮಸ್ಯೆಯನ್ನು ಕೂಡಲೆ ಬಗೆಹರಿಸಬೇಕೆಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅಕ್ರಂ ಖಾನ್ ಆಗ್ರಹಿಸಿದ್ದಾರೆ.