ಕಾರವಾರ: ಕಟ್ಟಡ ನಿರ್ಮಾಣ ಕಾಮಗಾರಿ ವ್ಯವಸ್ಥಿತವಾಗಿ ನಿರ್ಮಾಣವಾಗಬೇಕು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.
ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ನಗರದ ಹೃದಯ ಭಾಗದಲ್ಲಿರುವ ಈ ಕಾಲೇಜು ಅತ್ಯಂತ ಮಹತ್ವದ್ದಾಗಿದೆ. ಶೈಕ್ಷಣಿಕ ಗುಣಮಟ್ಟವು ಉತ್ತಮವಾಗಿದ್ದು, ಕಟ್ಟಡ ನಿರ್ಮಾಣಕ್ಕೆ 4 ಕೋಟಿ ರೂ. ಒದಗಿಸಲಾಗಿದೆ. ಈಗ ಇರುವ ಜಾಗದಲ್ಲಿ ಕಟ್ಟಡಗಳನ್ನು ಸಮರ್ಪಕವಾಗಿ ನಿರ್ಮಾಣ ಮಾಡಬೇಕು ಎಂದರು.
ಐತಿಹಾಸಿಕ ಮಹತ್ವವನ್ನು ಈ ಕಾಲೇಜು ಹೊಂದಿದೆ. ಇಲ್ಲಿ ಕಲಿತ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಗರವು ಬೆಳೆಯುತ್ತಿದೆ. ಆಕರ್ಷಣೆ, ಹಾಗೂ ಉತ್ತಮ ಶೈಕ್ಷಣಿಕ ಕೇಂದ್ರವಾಗಿ ಈ ಕಾಲೇಜು ಬೆಳೆಯಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರ್ಡೇಕರ, ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ ಗುನಗಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರಾಜೇಶ ನಾಯ್ಕ, ಅರುಣ ಸಾಳುಂಕೆ, ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.