ಕಾರವಾರ: ಪ್ರತಿಯೊಬ್ಬ ವಿದ್ಯಾರ್ಥಿಯು ಜೀವನದಲ್ಲಿ ವಿನಯವನ್ನು ಬೆಳೆಸಿಕೊಳ್ಳುವುದು ಅತೀ ಅವಶ್ಯಕ. ವಿದ್ಯೆ ವಿನಯೇನ ಶೋಭಿತೆ ಎಂಬಂತೆ, ವಿನಯವೇ ಜೀವನದ ಶ್ರೇಯಸ್ಸಿಗೆ ನಾಂದಿಯಾಗಲಿದೆ ಎಂದು ವಾಸ್ತುಶಿಲ್ಪ ವಿನ್ಯಾಸಕಿ ಹಾಗೂ ಬಾಲಮಂದಿರ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಯೂ ಆಗಿರುವ ಸುರಭಿ ಪಿ.ನಾಯ್ಕ ನುಡಿದರು.
ಅವರು ನಗರದ ಹಿಂದೂ ಪ್ರೌಢಶಾಲೆಯ 125ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ‘ಕರಿರ್ಸ್ & ಯು’ ವಿಚಾರಗೋಷ್ಠಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರವಾರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಅನಿರುದ್ಧ ಹಳದಿಪುರಕರ ಮಾತನಾಡಿದರು. ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಸ್ವಾಗತ ಕೋರಿದರು. ಸುಮತಿ ದಾಮ್ಲೆ ಪ್ರೌಢಶಾಲೆಯ ಶಿಕ್ಷಕ ಸಂತೋಷ ಶೇಟ್ ಕಾರ್ಯಕ್ರಮ ನಿರ್ವಹಿಸಿದರು. ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅರುಣ ರಾಣೆ ಮತ್ತು ಸುರಭಿಯವರ ತಂದೆ- ತಾಯಿ ಪಾಂಡುರಂಗ ನಾಯ್ಕ, ಉಷಾ ನಾಯ್ಕ ಹಾಗೂ ಅವರ ಪತಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಮೂರೂ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದರು.