ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ 2022-23ರ ಸಾಲಿನ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಡಿ.10,ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳ ಶಿಸ್ತುಬದ್ಧ ಪಥ ಸಂಚಲನದ ಮೂಲಕ ಶುಭಾರಂಭವಾದ ಕಾರ್ಯಕ್ರಮದಲ್ಲಿ ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲ. ಪ್ರೊ. ಎನ್.ವಿ.ಜಿ. ಭಟ್ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ವಿಭಾಗದಲ್ಲಿ ಸಾಧನೆಗೈದ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಶ್ರೀಲಕ್ಷ್ಮಿ ಹೆಗಡೆ, ಕುಮಾರಿ ತನುಶ್ರೀ ಮಡಿವಾಳ, ಕುಮಾರಿ ಅರ್ಪಿತಾ, ಕುಮಾರ ಪ್ರಸನ್ನ ಹೆಗಡೆ ಕ್ರೀಡಾ ಜ್ಯೋತಿಯನ್ನು ಅತಿಥಿಗಳು ಸಮ್ಮುಖದಲ್ಲಿ ಬೆಳಗಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಅಂತರಾಷ್ಟ್ರೀಯ ಕ್ರೀಡಾಪಟು ಕುಮಾರಿ ಪ್ರೇರಣಾ ನಂದಕುಮಾರ್ ಶೇಟ್ ಉಪಸ್ಥಿತರಿದ್ದು, ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುವುದಲ್ಲದೇ ದೈಹಿಕ ಮಾನಸಿಕ ಸದೃಢತೆ ದೊರೆಯುತ್ತದೆ ಎಂದರು.
ದೈಹಿಕ ಶಿಕ್ಷಕಿ ಶ್ರೀಮತಿ ಚೇತನಾ ಪಾವಸ್ಕರ್ ನೇತೃತ್ವದಲ್ಲಿ ಕಿರಿಯ ವಿದ್ಯಾರ್ಥಿಗಳ ಯೋಗ ಕವಾಯಿತು ಎಲ್ಲರ ಗಮನ ಸೆಳೆಯಿತು. ಮುಖ್ಯಾಧ್ಯಾಪಕ ಶಶಾಂಕ್ ಹೆಗಡೆ ಇವರು ಸರ್ವರಿಗೂ ಸ್ವಾಗತ ಕೋರಿದರು. 9ನೇ ತರಗತಿಯ ವಿದ್ಯಾರ್ಥಿನಿಯರು ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನಾ ಗೀತೆಯನ್ನು ಹಾಡಿದರು. ಶಾಲೆಯ ಕ್ರೀಡಾ ಪ್ರತಿನಿಧಿ ಕುಮಾರಿ ಸೃಷ್ಟಿ ಗೌಳಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿದಳು. ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಸ್ತುತಿ ತುಂಬಾಡಿ ವಂದನಾರ್ಪಣೆ ನೆರವೇರಿಸಿದಳು. ಕಾರ್ಯಕ್ರಮದಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಲ. ಪ್ರಭಾಕರ್ ಹೆಗಡೆ, ಶಿಕ್ಷಣ ಸಂಸ್ಥೆ ಸದಸ್ಯರಾದ ಲ. ಲೋಕೇಶ್ ಹೆಗಡೆ, ಲಯನ್ಸ್ ಕ್ಲಬ್ ಸದಸ್ಯರಾದ ಶ್ಯಾಮ ಸುಂದರ್ ಭಟ್ ಉಪಸ್ಥಿತರಿದ್ದರು. ಸಹ ಶಿಕ್ಷಕಿಯರಾದ ಶ್ರೀಮತಿ ಅನಿತಾ ಭಟ್ ಮತ್ತು ಶ್ರೀಮತಿ ಮುಕ್ತಾ ನಾಯ್ಕ ಕಾರ್ಯಕ್ರಮ ನಿರ್ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು,ಶಿಕ್ಷಕ ಶಿಕ್ಷಕಿಯರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ದೈಹಿಕ ಶಿಕ್ಷಕ ನಾಗರಾಜ ಜೋಗಳೇಕರ್ ಮತ್ತು ಶ್ರೀಮತಿ ಚೇತನಾ ಪಾವಸ್ಕರ್ ಇವರ ನೇತೃತ್ವದಲ್ಲಿ , ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ ಸಹಕಾರದಲ್ಲಿ ಕ್ರೀಡಾಕೂಟವು ಉತ್ತಮವಾಗಿ ನೆರವೇರಿತು.