Slide
Slide
Slide
previous arrow
next arrow

ಲವ್ ಜಿಹಾದ್ ವಿರೋಧಿ ಪೊಲೀಸ್ ದಳದ ಸ್ಥಾಪನೆಗೆ ಗೃಹ ಸಚಿವರಿಗೆ ಮನವಿ

300x250 AD

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಘಟನೆಗಳ ಹಿನ್ನೆಲೆ ‘ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ‘ಪೊಲೀಸ್ ವಿಶೇಷ ಶಾಖೆ’ಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ದುರ್ಗಾ ವಾಹಿನಿಯಿಂದ ಮಾನ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ, ರಣರಾಗಿಣಿ ಮಹಿಳಾ‌‌ ಶಾಖೆಯ ಸೌ. ಭವ್ಯ ಗೌಡ, ದುರ್ಗಾ ವಾಹಿನಿಯ ಸೌ. ನಂದಿನಿ ರಾಜ್, ಶ್ರೀರಾಮ ಸೇನೆಯ ಸುಂದ್ರೇಶ, ಅಮರನಾಥ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ ಮಾತನಾಡಿ, ದೆಹಲಿಯ ಜಿಹಾದಿ ಅಪ್ತಾಭ್ ಹಿಂದೂ ಯುವತಿ ಶ್ರದ್ಧಾ ಬರ್ಬರವಾಗಿ ಹತ್ಯೆ ಮಾಡಿದಂತೆ ರಾಜಗಯದಲ್ಲಿ ಸಹ ಹೆಚ್ಚು ಲವ್ ಜಿಹಾದ್ ಘಟನೆಗಳು ನಡೆಯುತ್ತಿದೆ. ಕಳೆದ ವಾರ ರಾಯಚೂರಿನಲ್ಲಿ ಇಬ್ಬರು ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗಿ ಇಸ್ಲಾಮ್ ಗೆ ಮತಾಂತರವಾದರು. ಪೋಷಕರು ದೂರು ನೀಡಿದರೂ ಸಹ ಪೋಲಿಸರು ಅಪರಾಧಿಯ ಬಂಧನ ಮಾಡಿಲ್ಲ. ಈ ಪ್ರಕರಣವನ್ನು ಮತಾಂತರ ಕಾಯಿದೆ ಎಂದು ನೊಂದಣೆ ಮಾಡಿಲ್ಲ. ಮಾರ್ಚ್ 2022 ರಂದು ಗದಗದಲ್ಲಿ ಅಪೂರ್ವ  ಯುವತಿಯು ಇಸ್ಲಾಮ್‌ಗೆ ಮತಾಂತರ ಮಾಡಿ, ನಂತರ ಆಕೆಯ  ಹತ್ಯೆ ಮಾಡಲು ಪ್ರಯತ್ನ ನಡೆಯಿತು. ಮಂಗಳೂರು, ಉಡುಪಿ, ಶಿವಮೊಗ್ಗ, ಕೊಡಗು & ಬೆಂಗಳೂರಿನಲ್ಲಿ ಮುಸಲ್ಮಾನ್ ಯುವತಿಯರ ಶಾಹಿನ್ ಗ್ಯಾಂಗ್ ಲವ್ ಜಿಹಾದ್ ಮಾಡಲು ಕಾರ್ಯನಿರತವಾಗಿದೆ. ಅವರು ಹಿಂದೂ ಯುವತಿಯರನ್ನು ಮುಸಲ್ಮಾನ್ ಯುವಕರ ಜೊತೆಗೆ ಪರಿಚಯಿಸಿ ಲವ್ ಜಿಹಾದ್ ಮಾಡಿಸುತ್ತಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಇದ್ದರೂ ಸಹ ವ್ಯಾಪಕವಾಗಿ ಲವ್ ಜಿಹಾದ್’ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚಾಗಿದೆ. ಇದನ್ನು ತಡೆಯಲು ‘ಲವ್ ಜಿಹಾದ್ ವಿರೋಧಿ ಪೊಲೀಸ್ ದಳ’ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹ ಮಾಡಲಾಯಿತು.

ಲವ್ ಜಿಹಾದ್ ಗೆ ಪ್ರಚೋಧನೆ ನೀಡುವ ಮಸೀದಿ,‌ ಮದರಸಾ, ಮೌಲ್ವಿ, ಶಾಹಿನ್ ಗ್ಯಾಂಗ್‌ ಮೇಲೆ ಕ್ರಮ ಜರುಗಿಸಬೇಕು. ಅಷ್ಟೇ ಅಲ್ಲದೇ ರಾಜ್ಯದಲ್ಲಿ 21, 000 ಯುವತಿಯರು, ಮಹಿಳೆಯರು ಕಾಣೆಯಾಗಿದ್ದಾರೆ, ಅದರ ಹಿಂದೆ ಲವ್ ಜಿಹಾದ್ ಮಾಫಿಯಾ ಕಾರ್ಯನಿರತ ಇದೆಯಾ ಪರಿಶೀಲನೆ‌ ಮಾಡಲು ಆಗ್ರಹ ಮಾಡಲಾಯಿತು.

300x250 AD

ಮನವಿಗೆ ಸ್ಪಂದಿಸಿದ ಗೃಹ ಸಚಿವರು, ಇದರ ಬಗ್ಗೆ ಸರಕಾರದಲ್ಲಿ ಚರ್ಚೆ ಮಾಡುತ್ತೇವೆ. ಮತಾಂತರ ಉದ್ದೇಶದಿಂದ ನಡೆಯುವ ಲವ್ ಜಿಹಾದ್ ಪ್ರಕರಣಗಳನ್ನು ಮತಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಲು ಪೊಲೀಸ್ ಇಲಾಖೆಯ ಸಭೆಯಲ್ಲಿ ಸೂಚಿಸುತ್ತೇವೆ ಎಂದರು.

Share This
300x250 AD
300x250 AD
300x250 AD
Back to top