Slide
Slide
Slide
previous arrow
next arrow

ಭುಟ್ಟೋ ಹೇಳಿಕೆಗೆ ಖಂಡನೆ; ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಬಿಜೆಪಿಗರು

300x250 AD

ಕಾರವಾರ: ಪ್ರಧಾನಿ ಮೋದಿ ವಿರುದ್ಧ ಪಾಕ್ ಸಚಿವ ಬುಟ್ಟೋ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನ ಖಂಡಿಸಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ.

ನಗರದ ಸುಭಾಷ್ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು, ಬಿಲಾವಲ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದರು. ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಈ ವೇಳೆ ಬುಟ್ಟೋ ವಿರುದ್ಧ ಘೋಷಣೆ ಕೂಗಿದ್ದಷ್ಟೆ ಅಲ್ಲದೇ, ಕೊನೆಗೆ ಬುಟ್ಟೋ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ನಾಯಕ, ಜಿಲ್ಲಾ ಪ್ರಭಾರಿ ಎನ್.ಎಸ್.ಹೆಗಡೆ ಮಾತನಾಡಿ, ಪಾಕಿಸ್ತಾನ ಹಾಗೂ ಕಾಂಗ್ರೆಸ್ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ನೇರವಾಗಿ ಪ್ರಧಾನಮಂತ್ರಿಯನ್ನು ವ್ಯಕ್ತಿಗತ ಆರೋಪವನ್ನು ನಾವು ಸಹಿಸುವುದಿಲ್ಲ. ಕಳೆದ 2014ರಿಂದ ಮೋದಿಜಿಯವರು ಇಡೀ ವಿಶ್ವಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿರುವುದನ್ನ ಸಹಿಸಲಾರದೆ ಈ ರೀತಿ ಅವಹೇಳನ ಮಾತನ್ನು ಬಿಜೆಪಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

300x250 AD

ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ನಾಗರಾಜ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಚಂದ್ರು ಎಸಳೆ, ನಗರ ಅಧ್ಯಕ್ಷ ನಾಗೇಶ್ ಕುರುಡೇಕರ್, ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ, ವಿಶೇಷ ಆಹ್ವಾನಿತ ಮನೋಜ್ ಭಟ್ ಸೇರಿದಂತೆ ಬಿಜೆಪಿ ಮುಖಂಡರು, ಪ್ರಮುಖರು, ಜನಪ್ರತಿನಿಧಿಗಳು, ಮೋರ್ಚಾ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಇದ್ದರು.

Share This
300x250 AD
300x250 AD
300x250 AD
Back to top