ಕುಮಟಾ: ತಾಲೂಕಿನ ದುಂಡಕುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತದಲ್ಲಿ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ದುಂಡಕುಳಿ ಬಳಿ ಲಾರಿ ಟೈಯರ್ ಪಂಚರ್ ಆಗಿ ನಿಂತಿತ್ತು. ಈ ವೇಳೆ ನಿಂತ ಲಾರಿಗೆ ಸರಕು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಲಾರಿ ಟೈಯರ್ ಪಂಚರ್ ತೆಗೆಯುತ್ತಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತದ ರಭಸಕ್ಕೆ ಟೈಯರ್ ಪಂಚರ್ ತೆಗೆಯುತ್ತಿದ್ದ ಚಾಲಕನ ದೇಹ ಛಿದ್ರ ಛಿದ್ರವಾಗಿದ್ದು, ಕುಮಟಾ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.