ಹೊನ್ನಾವರ: ಚಳ್ಳಕೆರೆಯ ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ಸಂಸ್ಥೆ ನಡೆಸಿದ ಗಣಿತ ಪರೀಕ್ಷೆಯಲ್ಲಿ ಮಲ್ನಾಡ್ ಪ್ರೋಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.
ಈ ಪರೀಕ್ಷೆಯು ಕೇವಲ ಫಲಿತಾಂಶಕ್ಕೆ ಮಾತ್ರ ಸೀಮಿತವಾಗಿರದೆ, ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆತ್ಮಸ್ಥೈರ್ಯದಿಂದ ಪರೀಕ್ಷೆಯನ್ನು ಎದುರಿಸಲು ಸಹಾಯವಾಗುವುದು ಎಂಬುದು ಈ ಪರೀಕ್ಷೆಯ ಉದ್ದೇಶವಾಗಿದೆ.
ಮ್ಯಾಥಮೇಟಿಕಾ ಮ್ಯಾಥ್ಸ್ ಟ್ಯಾಲೆಂಟ್ ಪರೀಕ್ಷೆಯಲ್ಲಿ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲೂಕಿಗೆ ಹೆಮ್ಮೆಯನ್ನು ತಂದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಭಟ್ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಜೈನುದ್ದೀನ್ ಮಹಮ್ಮದ್ ಇರ್ಫಾನ್ ಶೇಖ್ ರಾಷ್ಟ್ರಮಟ್ಟದಲ್ಲಿ 11ನೇ ಸ್ಥಾನ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಂಜಿತಾ ಶಾನಭಾಗ್ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಉನ್ನತಿ ಹೆಗಡೆ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ, ಸಂಜನಾ ಗೌಡ ಜಿಲ್ಲಾ ಮಟ್ಟದಲ್ಲಿ ಮೊದಲನೇ ಸ್ಥಾನ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದಿಶಾ ಶಿರಸಿಕರ್ ತಾಲೂಕು ಮಟ್ಟದಲ್ಲಿ 3ನೇ ಸ್ಥಾನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೀರ್ತಿ ರಾಯ್ಕರ್ ತಾಲೂಕು ಮಟ್ಟದಲ್ಲಿ 4ನೇ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.
ಇವರ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ, ಮತ್ತು ಕಾಲೇಜಿನ ಸಮಸ್ತ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.