ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ (100) ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆ್ಯಂಡ್ ರೀಸರ್ಚ್ ಸೆಂಟರ್ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು.
‘ಶ್ರೀಮತಿ ಹೀರಾಬೆನ್ ಮೋದಿ ಅವರು 2022ರ ಡಿಸೆಂಬರ್ 30ರಂದು ಬೆಳಗಿನ ಜಾವ 3.30ಕ್ಕೆ ನಿಧನರಾಗಿದ್ದಾರೆ’ ಎಂದು ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಭವ್ಯವಾದ ಶತಮಾನವು ಭಗವಂತನ ಪಾದದಲ್ಲಿ ನೆಲೆಸಿದೆ. ತಾಯಿಯಲ್ಲಿ, ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿರುವ ತ್ರಿಮೂರ್ತಿಗಳನ್ನು ನಾನು ಯಾವಾಗಲೂ ಅನುಭವಿಸಿದ್ದೇನೆ ಎಂದು ಪ್ರಧಾನಿ ಮೋದಿ ತಾಯಿಯ ನಿಧನದ ಬಗ್ಗೆ ಪೋಸ್ಟ್ ಮಾಡಿದ್ದಾರೆ.
“ಅವಳ 100 ನೇ ಜನ್ಮದಿನದಂದು ನಾನು ಅವಳನ್ನು ಭೇಟಿಯಾದಾಗ, ಅವಳು – ಯಾವಾಗಲೂ ನೆನಪಿಟ್ಟುಕೊ – ಬುದ್ಧಿವಂತಿಕೆಯಿಂದ ಕೆಲಸ ಮಾಡು, ಪರಿಶುದ್ಧತೆಯಿಂದ ಬದುಕು ಎಂದು ಅವಳು ಒಂದು ಮಾತನ್ನು ಹೇಳಿದ್ದಳು ಎಂದು ಮೋದಿ ಹೇಳಿದ್ದಾರೆ.