Slide
Slide
Slide
previous arrow
next arrow

ಕೋಲಸಿರ್ಸಿಯಲ್ಲಿ ಮಹಿಳಾ, ವಿಶೇಷಚೇತನರ ಗ್ರಾಮಸಭೆ

300x250 AD

ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಗ್ರಾಮ ಪಂಚಾಯತ ಸಭಾಭವನದಲ್ಲಿ 2022- 23ನೇ ಸಾಲಿನ ಮಕ್ಕಳ ಹಕ್ಕುಗಳ, ಮಹಿಳಾ ಹಾಗೂ ವಿಶೇಷಚೇತನರ ಗ್ರಾಮಸಭೆ ಗ್ರಾಮ ಪಂಚಾಯತ ಅಧ್ಯಕ್ಷೆ ಮಮತಾ ಸುರೇಶ ಮಡಿವಾಳರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಮಕ್ಕಳ, ಮಹಿಳೆಯರ ಹಾಗೂ ವಿಶೇಷಚೇತನರ ಸಮಸ್ಯೆಗಳು ಹಾಗೂ ಅದಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳು ಹಾಗೂ ಇನ್ನಿತರೇ ವಿಷಯಗಳ ಕುರಿತು ವಿಸ್ತ್ರತವಾಗಿ ಚರ್ಚಿಸಲಾಯಿತು.
ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ವಿನಾಯಕ ಕೆ ಆರ್, ಸರ್ವ ಸದಸ್ಯರುಗಳು, ಮಾನ್ಯ ನೋಡೆಲ್ ಅಧಿಕಾರಿಗಳು, ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ ಕಾರ್ಯದರ್ಶಿಯವರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲಾ ಶಾಲೆಯ ಶಿಕ್ಷಕರು ಮತ್ತು ಎಸ್.ಡಿ.ಎಮ್.ಸಿ ಅಧ್ಯಕ್ಷರು, ಶಾಲಾ ಮಕ್ಕಳು, ಆರಕ್ಷಕ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ವಿಶೇಷಚೇತನರ ಪ್ರತಿನಿಧಿಗಳಾದ ಎಮ್.ಆರ್.ಡಬ್ಲ್ಯು ಮತ್ತು ವಿ.ಆರ್.ಆರ್.ಡಬ್ಲ್ಯು ರವರು, ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ವಿಶೇಷಚೇತನರು, ಸಾರ್ವಜನಿಕರು, ಇತರೇ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಗ್ರಂಥಪಾಲಕರು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

ಸ್ಪರ್ಧಾ ವಿಜೇತರಿಗೆ ಬಹುಮಾನ
ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ವಿಶೇಷಚೇತನರಿಗೆ ಅವಶ್ಯಕ ಸಾಧನ ಸಲಕರಣೆಗಳನ್ನು ಸಭೆಯಲ್ಲಿ ನೀಡಲಾಯಿತು. ಮತ್ತು ಚಿಣ್ಣರ ಚಿತ್ತಾರ ಅಭಿಯಾನದಡಿಯಲ್ಲಿ ಹಿರಿಯ/ಕಿರಿಯ ವಿಭಾಗದಲ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶಾಲಾ ಮಕ್ಕಳಿಗೆ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ, ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಪ್ರೋತ್ಸಾಹಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top