ಭಟ್ಕಳ: ಬಿಜೆಪಿ ಮಂಡಲದ ವತಿಯಿಂದ ಮೂಡಭಟ್ಕಳ ಬೂತ್ ನಂಬರ್ 191ರ ಶ್ರೀಲಕ್ಷ್ಮೀ ನರಸಿಂಹ ದೇವಸ್ಥಾನದ ಸಭಾಭವನದಲ್ಲಿ ಬೂತ್ ವಿಜಯ ಅಭಿಯಾನದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಕುರಿತು ಅಭಿಯಾನದ ಜಿಲ್ಲಾ ಸಂಚಾಲಕರು, ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಮಾತನಾಡಿ, ಕಾರ್ಯಕ್ರಮದ ರೂಪರೇಷೆ, ಉದ್ದೇಶ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಗೋವಿಂದ ನಾಯ್ಕ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸುವುದರ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಸಭಾಧ್ಯಕ್ಷತೆ ವಹಿಸಿದ ಮಂಡಲದ ಅಧ್ಯಕ್ಷ ಸುಬ್ರಾಯ ದೇವಾಡಿಗ ಮಾತನಾಡಿ, ಬೂತ್ ವಿಜಯ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಪೇಜ್ ಪ್ರಮುಖರಿಗೆ ಪೇಜ್ ವಿತರಣೆ ಮಾಡಲಾಯಿತು. ಸಭಾ ಕಾರ್ಯಕ್ರಮದಲ್ಲಿ ಬೂತ್ ಅಧ್ಯಕ್ಷ ನಾಗೇಶ ನಾಯ್ಕ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೆಂಕಟೇಶ ನಾಯ್ಕ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರವಿ ನಾಯ್ಕ ಜಾಲಿ, ಮಾಜಿ ಸೈನಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀಕಾಂತ ನಾಯ್ಕ, ಕಾನೂನು ಪ್ರಕೋಷ್ಠದದ ಜಿಲ್ಲಾ ಸಂಚಾಲಕ ಸುರೇಶ ನಾಯ್ಕ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ರಾಜ್ಯ ಸದಸ್ಯ ಮುಕುಂದ ನಾಯ್ಕ, ಪ್ರಕೋಷ್ಠ ಪ್ರಮುಖರಾದ ದಿನೇಶ ನಾಯ್ಕ, ಮಂಡಲದ ಅಭಿಯಾನದ ಸಂಚಾಲಕ ಶ್ರೀನಿವಾಸ ನಾಯ್ಕ, ಮುಟ್ಟಳ್ಳಿ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು. ಮಂಡಲದ ಪ್ರಧಾನ ಕಾರ್ಯದರ್ಶಿ ಮೋಹನ ನಾಯ್ಕ ಸರ್ವರನ್ನೂ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಭಾಸ್ಕರ ದೈಮನೆ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರದ ಪ್ರಮುಖರು, ಮೋರ್ಚಾ ಹಾಗೂ ಪ್ರಕೋಷ್ಠದ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮುಂತಾದವರಿದ್ದರು.