Slide
Slide
Slide
previous arrow
next arrow

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

300x250 AD

ಕಾರವಾರ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022- 23ನೇ ಸಾಲಿನ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಎಂ, ಐಐಟಿ, ಐಐಎಸ್‌ಸಿ, ಐಐಐಟಿಎಸ್, ಎನ್‌ಐಟಿಎಸ್, ಐಐಎಸ್‌ಇಆರ್‌ಎಸ್, ಏಮ್ಸ್, ಎನ್‌ಯುಎಲ್, ಐಎಸ್‌ಎಂ, ಐಐಪಿ, ಐಎಸ್‌ಐ, ಜೆಐಪಿಎಂಇಆರ್ ಅಥವಾ ಎಸ್‌ಪಿಎಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ),3(ಎ) ಹಾಗೂ 3(ಬಿ) ಗೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು https://www.bcwd.karnataka.gov.in ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ಮೊ.ಸಂಖ್ಯೆ: 8050770005, 8050770004, ದೂ.ಸಂ: 08382226589 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top