ಬೆಂಗಳೂರು: ಗುತ್ತಿಗೆದಾರರಿಗೆ ಕೊಡಬೇಕಾದ ಬಾಕಿ ಬಿಲ್ ಸರ್ಕಾರ ಪಾವತಿ ಮಾಡುತ್ತಿಲ್ಲ. ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರ 25,000 ಕೋಟಿ ರೂಪಾಯಿ ಬಾಕಿ ಬಿಲ್ ಉಳಿಸಿಕೊಂಡಿದೆ. ತಕ್ಷಣ ಸರ್ಕಾರ ಬಾಕಿ ಬಿಲ್ ಹಣ ಬಿಡುಗಡೆ ಮಾಡಬೇಕು ಎಂದು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ಬಾಕಿಯಿದೆ. ನೀರಾವರಿ ಇಲಾಖೆಯಿಂದ 8 ಸಾವಿರ ಕೋಟಿ ರೂ. ಬಾಕಿಯಿದೆ. ಬಿಬಿಎಂಪಿಯಿoದ 3 ಸಾವಿರ ಕೋಟಿ ರೂ. ಬಾಕಿಯಿದೆ. ಒಟ್ಟು 25 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿಯಿದೆ. ರಾಜ್ಯಸರ್ಕಾರ ಬಾಕಿ ಬಿಲ್ ಪಾವತಿಸುವವರೆಗೂ ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಬುಧವಾರ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಬಾಕಿ ಬಿಲ್ ಹಣ ಬಿಡುಗಡೆ ಮಾಡದಿದ್ದರೆ ಜನವರಿ 18ರಿಂದ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.