ಕುಮಟಾ: ತಾಲೂಕಿನ ಕಲಭಾಗ- ಬಗ್ಗೋಣ- ಊರಕೇರಿ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ 75 ಲಕ್ಷ ರೂ. ಮಂಜೂರಾಗಿದ್ದು, ಶಾಸಕ ದಿನಕರ ಶೆಟ್ಟಿ ಮರುಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು.
ತಾಲೂಕಿನ ವಾಲಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 2.25 ಕಿ.ಮೀ ರಸ್ತೆಯು ಮರುಡಾಂಬರೀಕರಣಗೊಳ್ಳುತ್ತಿದ್ದು, ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಅವರು ವೀಕ್ಷಿಸಿದರು. ನಂತರ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅಲ್ಲದೇ ಸ್ಥಳೀಯರಿಗೂ ಕೂಡ ಕಾಮಗಾರಿಯ ಬಗ್ಗೆ ಗಮನ ಹರಿಸುವ ಜೊತೆಗೆ ಏನಾದರೂ ಸಮಸ್ಯೆಗಳಿದ್ದರೆ ತನ್ನ ಗಮನಕ್ಕೆ ತನ್ನಿ ಎಂದು ತಿಳಿಸುವ ಜೊತೆಗೆ ನಮ್ಮ ರಾಜ್ಯ ಸರ್ಕಾರ ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ಅಗತ್ಯ ಕ್ರಮ ವಹಿಸಿದ್ದು, ಸಾಕಷ್ಟು ಅನುದಾನ ನೀಡುವ ಮೂಲಕ ಜನರ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ವಾಲಗಳ್ಳಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ ಶಾನಭಾಗ, ಉಪಾಧ್ಯಕ್ಷೆ ಗಂಗಾ ಪಟಗಾರ, ಸದಸ್ಯರಾದ ಗಣಪತಿ ಭಟ್ಟ, ಮಂಜುನಾಥ ನಾಯ್ಕ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸುಬ್ರಾಯ ಶಾನಭಾಗ, ಪ್ರಮುಖರಾದ ಕುಮಾರ ಕವರಿ, ಉಮಾಪತಿ ಶಾಸ್ತ್ರಿ, ಗಿರೀಶ ಮಡಿವಾಳ, ನಾಗರಾಜ ನಾಯ್ಕ, ಲೊಕೋಪಯೋಗಿ ಇಲಾಖೆಯ ಅಭಿಯಂತರ ಸುದರ್ಶನ ಹೊನ್ನಾವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.