ಶಿರಸಿ: ಆಧುನಿಕ ಸಂಸ್ಕೃತಿಯಲ್ಲಿ ಪ್ರಾಚೀನ ಸಂಸ್ಕೃತಿ ಅವನತಿಯಾಗುತ್ತಿದೆ. ಆಧುನಿಕತೆ ಎಂಬ ಹೆಸರಿನಲ್ಲಿ ನಾವು ಜನಪದ ಕಲೆಯನ್ನು ಮರೆಯುತ್ತಿದ್ದೇವೆ.ಇಂದಿನ ಮಕ್ಕಳಿಗೆ ಜನಪದ ಸಾಹಿತ್ಯದ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ. ಮೊಬೈಲ್ ಅಲ್ಲಿ ತಮ್ಮ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಕೇವಲ ಪುಸ್ತಕದ ಜ್ಞಾನವನ್ನಷ್ಟೆ ಬೆಳೆಸದೆ ಕಲೆ ಸಾಹಿತ್ಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಹಾಗೂ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಂದು ಜನಪದ ತತ್ವಕಾರ ಮಾಸಲ್ ಮಣಿ ಹೇಳಿದರು.
ಶಿರಸಿಯ ಎಂಇಎಸ್ ನ ಎಂ.ಎಂ.ಕಲಾ ಮತ್ತು ವಿಜ್ಞಾನ ಕಾಲೇಜಿನ ಇತಿಹಾಸ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ್ದ ಜನಪದ ಸಾಹಿತ್ಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಎಸ್.ಹಳೆಮನೆ ಸ್ವಾಗತಿಸಿ ಮಾತನಾಡಿ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯಾಗಿ ಜನಪದ ಕಲೆಗಳ ಕಲಿಕೆಯನ್ನು ಅಳವಡಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಜಾನಪದ ಹಾಡುಗಳನ್ನು ತತ್ವಕಾರ್ ಅದ್ಭುತವಾಗಿ ಹಾಡಿದರು. ವಿದ್ಯಾರ್ಥಿನಿ ಸ್ನೇಹಾ ಜಿ. ನಿರೂಪಿಸಿ ವಂದಿಸಿದಳು.