ಕುಮಟಾ: ಶ್ರೀಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಮಿರ್ಜಾನಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಜಗದ್ಗುರು ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿರುವ ಮಹಾಸತಿ ಭೈರವಿಗೆ ಅಭಿಷೇಕ, ಮಹಾಮಂಗಳಾರತಿ ಮಾಡುವ ಮೂಲಕ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ಶ್ರೀಕಾಲಭೈರವೇಶ್ವರ ಮತ್ತು ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಮೂರ್ತಿಗಳಿಗೆ ಪಂಚಾಮೃತಾಬಿಷೇಕ, ಪುಷ್ಪಾರ್ಚನೆ, ದೀಪಾರಾಧನೆ, ನೈವೇದ್ಯ ನಂತರ ಶ್ಲೋಕ ಪಠನೆಯೊಂದಿಗೆ ಮಹಾಮಂಗಳಾರತಿ ನಡೆಸಲಾಯಿತು.
ವಿದ್ಯಾರ್ಥಿಗಳು ಗುರುಪಾದುಕಾಕ್ಷಂ ಪಠಿಸಿದರು ಮತ್ತು ಗುರುಗಳ ಕುರಿತು ಭಜನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಧರ ಹೆಚ್.ಆರ್. ಡಾ.ಬಾಲಗಂಗಾದರನಾಥ ಮಹಾಸ್ವಾಮೀಜಿಯವರ ಜೀವನ ಚರಿತ್ರೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಲೀನಾ ಎಂ.ಗೊನೇಹಳ್ಳಿ, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು, ಸಮಸ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದು ತೀರ್ಥ ಪ್ರಸಾದ ಸ್ವೀಕರಿಸಿ ಪುನೀತರಾದರು.